Sri Purandara Dasaru

 

ಹುಟ್ಟಿದ್ದು                   : 1484 , ಕ್ಷೇಮಪುರ, ತೀರ್ಥಹಳ್ಳಿ ಹತ್ತಿರ, ಶಿವಮೊಗ್ಗ ಜಿಲ್ಲೆ, ಕರ್ನಾಟಕ.
ಜನ್ಮ ನಾಮ              : ಶ್ರೀನಿವಾಸ ನಾಯಕ
ತಂದೆಯ ಹೆಸರು         : ವರದಪ್ಪ ನಾಯಕ
ತಾಯಿಯ ಹೆಸರು        : ಲಕ್ಷ್ಮೀದೇವಿ
ಹೆಂಡತಿಯ ಹೆಸರು       : ಸರಸ್ವತೀಬಾಯಿ
ನಾಲ್ಕು ಜನ ಮಕ್ಕಳು     :  ಲಕ್ಷ್ಮಣ | ಹೇವಣ (ಹೇಮವರ್ಣದಾಸರು) | ಮಧ್ವಪತಿ | ವರದಪ್ಪ

ದಾಸದೀಕ್ಷೆಯ ನಂತರದ ನಾಮ : ಶ್ರೀಪುರಂದರ ದಾಸರು

ಹರಿಪಾದ ಸೇರಿದ್ದು        : 1564, ಪುಷ್ಯಮಾಸ ಬಹುಳ ಅಮಾವಾಸ್ಯೆ, ಹಂಪಿ, ಕರ್ನಾಟಕ

ಇವರ ಮೊದಲ ಹೆಸರು ಶ್ರೀನಿವಾಸ ನಾಯಕ, ಜನ್ಮ ಸ್ಥಳ ಪುರಂದರಗಡ, ತಂದೆ ವರದಪ್ಪನಾಯಕ, ತಾಯಿ ಲಕ್ಷ್ಮಿದೇವಿ. ಪುರಂದರದಾಸರ ತಂದೆ ವರದಪ್ಪ ನಾಯಕ ಲೇವಾದೇವಿ ವೃತ್ತಿಯಲ್ಲಿದ್ದವರು. ಅನೇಕ ವರ್ಷಗಳ ಕಾಲ ಮಕ್ಕಳಾಗದ ಕಾರಣ ತಿರುಪತಿ ಶ್ರೀನಿವಾಸನಿಗೆ ಪ್ರಾರ್ಥನೆ ಸಲ್ಲಿಸಿದ ಮೇಲೆ ಮಗುವಾಯಿತು ಎಂಬ ನಂಬಿಕೆಯಿದೆ. ಇದರಿಂದಲೇ ಅವರು ಮಗನಿಗೆ ಶ್ರೀನಿವಾಸ ಎಂದು ಹೆಸರಿಟ್ಟರಂತೆ.

ವೈರಾಗ್ಯ

ಶ್ರೀನಿವಾಸ ನಾಯಕ ಬೆಳೆದ ನಂತರ ತಂದೆಯ ವೃತ್ತಿಯನ್ನೇ ಮುಂದುವರಿಸಿದ. ಆದರೆ ಅತ್ಯಂತ ಜಿಪುಣನೆಂದು ಹೆಸರಾದ ಶ್ರೀನಿವಾಸ, ತಂದೆ ಅಸ್ವಸ್ಥರಾದಾಗಲೂ ಹಣ ಖರ್ಚು ಮಾಡಲು ತಡೆದನಂತೆ. ಶ್ರೀನಿವಾಸನ ಪತ್ನಿ ಸರಸ್ವತಿ ದಾನಶೀಲೆಯಾಗಿ, ಪತಿಯ ಕೋಪ ಅವಳ ಮೇಲೆ ಬೀಳುತ್ತಿತ್ತು ಎಂದು ಹೇಳುತ್ತಾರೆ. ಅವರ ಸಂಸಾರ ಮೂಲತಃ ಪಂಡರಾಪುರ/ ಪಂಡರಾಪುರದಲ್ಲಿದ್ದರೂ ಶ್ರೀನಿವಾಸ ನಂತರದ ವರ್ಷಗಳಲ್ಲಿ ಹಂಪೆಯಲ್ಲಿದ್ದನೆಂದು ತೋರುತ್ತದೆ.

ವಿಠ್ಠಲ (ವಿಷ್ಣು) ಬಡ ಬ್ರಾಹ್ಮಣನ ವೇಷದಲ್ಲಿ ಒಮ್ಮೆ ಶ್ರೀನಿವಾಸನ ಅಂಗಡಿಗೆ ಬಂದು ಮಗನ ಉಪನಯನಕ್ಕೆ ಹಣ ಬೇಡಿದನಂತೆ. ಜಿಪುಣ ಶ್ರೀನಿವಾಸ ಪ್ರತಿ ದಿನವೂ ಮಾರನೆಯ ದಿನ ಬರಹೇಳುತ್ತ, ಆರು ತಿಂಗಳುಗಳ ಕಾಲ ಮುಂದೆ ಹಾಕಿದನಂತೆ. ಕೊನೆಗೆ ಬ್ರಾಹ್ಮಣನ ಕಾಟ ತಡೆಯಲಾರದೆ ಒಂದು ಸವಕಲು ನಾಣ್ಯವನ್ನು ಕೊಟ್ಟನಂತೆ. ವಿಠ್ಠಲ ಈಗ ಶ್ರೀನಿವಾಸನ ಮನೆಗೆ ತೆರಳಿ ಆರು ತಿಂಗಳುಗಳ ಕಾಲ ಒಬ್ಬ ವರ್ತಕ ತನ್ನನ್ನು ಸತಾಯಿಸಿ ಕೊನೆಗೆ ಸವಕಲು ನಾಣ್ಯ ಕೊಟ್ಟ ಕಥೆ ಹೇಳಿದನಂತೆ. ಮಾರನೇ ದಿನ ಅದೇ ಬ್ರಾಹ್ಮಣ ಮನೆಗೆ ಬಂದು ಸರಸ್ವತಿಯ ಬಳಿ ತನ್ನ ಮಗನ ಉಪನಯನದ ಬಗ್ಗೆ ಹೇಳಿ ಅವಳಿಂದ ಸಹಾಯ ಯಾಚಿಸುತ್ತಾನೆ. ಸರಸ್ವತಿ ಮರುಕದಿಂದ ತನ್ನ ಬಳಿ ಯವುದೇ ಧನ ಆಭರಣಗಳಿಲ್ಲ ಎಲ್ಲವೂ ತನ್ನ ಗಂಡನ ಬಳಿ ಇದೆ. ಅವರ ಅನುಮತಿ ಇಲ್ಲದೇ ಏನನ್ನೂ ಕೊಡುವ ಪರಿಸ್ಥಿತಿಯಲ್ಲಿಲ್ಲ ಎಂದು ಬೇಸರ ಪಡುತ್ತಾಳೆ. ಆಗ ಆ ಬ್ರಾಹ್ಮಣ ನಿನ್ನ ತವರಿನಲ್ಲಿ ನಿನಗೆ ಕೊಟ್ಟ ಮೂಗುತಿಯ ಮೇಲೆ ನಿನ್ನ ಅಧಿಕಾರವಿದೆ. ಅದನ್ನೇ ಕೊಡು ಎಂದಾಗ, ಅವನಿಗೆ ತನ್ನ ಮೂಗುತಿಯನ್ನು ತೆಗೆದು ಕೊಟ್ಟಳಂತೆ. ಬ್ರಾಹ್ಮಣ ತಕ್ಷಣ ಮೂಗುತಿಯನ್ನು ಶ್ರೀನಿವಾಸನ ಅಂಗಡಿಗೆ ಒಯ್ದು ಅದನ್ನು ಅಡವಿಡಲು ಪ್ರಯತ್ನಿಸಿದನಂತೆ. ಶ್ರೀನಿವಾಸ ಆ ಮೂಗುತಿಯನ್ನು ಗುರುತಿಸಿ, ಹಣಕ್ಕೆ ನಾಳೆ ಬರುವಂತೆ ಬ್ರಾಹ್ಮಣನಿಗೆ ಹೇಳಿ, ಅದನ್ನು ಡಬ್ಬಿಯಲ್ಲಿಟ್ಟು ತಕ್ಷಣ ಮನೆಗೆ ಬಂದು ಪತ್ನಿಯ ಬಳಿ ಮೂಗುತಿಯನ್ನು ತೋರಿಸಲು ಹೇಳಿದನಂತೆ. ಹೆದರಿದ ಹೆಂಡತಿ ಸ್ನಾನ ಮಾಡುವಾಗ ತೆಗೆದಿಟ್ಟಿದ್ದೆ, ತರುತ್ತೇನೆಂದು ಒಳಗೆ ಹೋಗಿ, ಸ್ನಾನ ಕೊಠಡಿಯಲ್ಲಿ ವಿಷ ಕುಡಿಯುವ ಪ್ರಯತ್ನ ನಡೆಸಿದಾಗ ಅವಳ ವಿಷದ ಬಟ್ಟಲಿನೊಳಕ್ಕೆ ಮೇಲಿನಿಂದ ಮೂಗುತಿ ಬಿದ್ದಿತಂತೆ. ಅದನ್ನು ತಂದು ಶ್ರೀನಿವಾಸನಿಗೆ ಕೊಡುತ್ತಾಳೆ. ಅಂಗಡಿಗೆ ಹಿಂದಿರುಗಿ ಬಂದ ಶ್ರೀನಿವಾಸ ಡಬ್ಬಿಯನ್ನು ತೆಗೆದು ನೋಡಿದರೆ ಅಲ್ಲಿ ಇಟ್ಟಿದ್ದ ಮೂಗುತಿ ಮಾಯವಾಗಿತ್ತಂತೆ. ಆಗ ಅವನಿಗೆ ಬಂದ ಬ್ರಾಹ್ಮಣ ಬೇರೆ ಯಾರೂ ಅಲ್ಲ, ತನ್ನನ್ನು ಪರೀಕ್ಷಿಸಲು ಸ್ವತಃ ನಾರಾಯಣನೇ ಬ್ರಾಹ್ಮಣ ವೇಷದಲ್ಲಿ ಬಂದಿದ್ದನೆಂದು ಅರಿತು, ತನ್ನ ಬಗ್ಗೆ ತಾನೇ ನಾಚಿಕೆ ಪಟ್ಟುಕೊಂಡ ಶ್ರೀನಿವಾಸ, ತನ್ನ ಶ್ರೀಮಂತಿಕೆಯನ್ನು ತೊರೆದು ಹರಿದಾಸನಾಗುವ ನಿರ್ಧಾರ ತೆಗೆದುಕೊಂಡನಂತೆ. ದೇವರು ದಾರಿ ತೋರಿಸಿದ್ದರ ಬಗ್ಗೆ ಕೃತಜ್ಞತೆಗಾಗಿ ತಮ್ಮ ಹೆಂಡತಿಯ ಜ್ಞಾಪಕಾರ್ಥ ಒಂದು ಕೀರ್ತನೆಯನ್ನೂ ಪುರಂದರದಾಸರು ರಚಿಸಿದ್ದಾರೆ. ನಂತರ ಶ್ರೀನಿವಾಸ ನಾಯಕ ‘ಪುರಂದರದಾಸ’ ಎಂಬ ಹೆಸರನ್ನು ಪಡೆದರು.ಪುರಂದರದಾಸರ ಪದಗಳು ಪ್ರಾಸ ಮತ್ತು ಅರ್ಥದಲ್ಲಿ ಶ್ರೀಮಂತವಾಗಿವೆ. ಉದಾಹರಣೆಗೆ:

“ಕುದುರೆ ಅಂದಣ ಆನೆ ಬಯಸೋದು ನರಚಿತ್ತ
ಪಾದಚಾರಿ ಆಗೋದು ಹರಿ ಚಿತ್ತವಯ್ಯ”

ಪುರಂದರದಾಸರ ಪದಗಳು ಮುಂದೆ ಕರ್ನಾಟಕ ಸಂಗೀತ ಪದ್ಧತಿಯ ಬುನಾದಿಯಾದವು. ಶಾಸ್ತ್ರೀಯ ಸಂಗೀತವನ್ನು ಶ್ರೀ ಸಾಮಾನ್ಯನಿಗೆ ಪರಿಚಯ ಮಾಡಿಕೊಡಲು ಯತ್ನಿಸಿದ ಪುರಂದರದಾಸರು ಮಾಯಾಮಾಳವಗೌಳ ರಾಗದಿಂದ ಹಿಡಿದು ಹೊಸಬರಿಗೆ ಶಾಸ್ತ್ರೀಯ ಸಂಗೀತವನ್ನು ಕಲಿಸಿ ಕೊಡುವ ದಾರಿಯ ಬಗೆಗೆ ಯೋಚಿಸಿದರು. ಈಗಲೂ ದಕ್ಷಿಣ ಭಾರತದ ಶಾಸ್ತ್ರೀಯ ಸಂಗೀತದ ಪಾಠಗಳು ಪುರಂದರದಾಸರ ಸರಳೆ, ಜಂಟಿ ವರಸೆಗಳೊಂದಿಗೇ ಆರಂಭಿಸಲ್ಪಡುತ್ತವೆ. ಪುರಂದರದಾಸರ ‘ಪಿಳ್ಳಾರಿ ಗೀತೆಗಳು’ (ಉದಾ: ಲಂಬೋದರ ಲಕುಮಿಕರ…., ಕೆರೆಯ ನೀರನು ಕೆರೆಗೆ ಚೆಲ್ಲಿ…..ಇತ್ಯಾದಿ) ಸಂಗೀತದ ಸ್ವರ- ಸಾಹಿತ್ಯ- ತಾಳಗಳ ಸಂಯೋಜನೆಯನ್ನು ಅಭ್ಯಸಿಸಲು ಮೊದಲ ಮೆಟ್ಟಿಲು. ಕರ್ನಾಟಕ ಶಾಸ್ತ್ರೀಯ ಸಂಗೀತದ ತ್ರಿಮೂರ್ತಿಗಳಲ್ಲೊಬ್ಬರಾದ ಶ್ರೀ ತ್ಯಾಗರಾಜರು ತಮ್ಮ “ಪ್ರಹ್ಲಾದ ಭಕ್ತಿ ವಿಜಯಮ್” ಎಂಬ ಲೇಖನದಲ್ಲಿ ಶ್ರೀ ಪುರಂದರ ದಾಸರನ್ನು ತಮ್ಮ ಸಂಗೀತ ಗುರುಗಳೆಂದು ಹೇಳಿಕೊಂಡಿದ್ದಾರೆ. ಹರಿನಾಮಸ್ಮರಣೆಯ ರೂಪದಲ್ಲಿ ರಚಿಸಿದ ಅವರ ಕೃತಿಗಳು ದೇವರನಾಮಗಳಾಗಿ ಪ್ರಸಿದ್ಧವಾಗಿವೆ. ಅವರ ಹರಿಭಕ್ತಿ ಹಾಗೂ ಸಂಗೀತದಲ್ಲಿನ ಪಾಂಡಿತ್ಯ ಕನ್ನಡ ಸಾಹಿತ್ಯದಲ್ಲೇ ವಿಶಿಷ್ಟವಾದ ಸ್ಥಾನವನ್ನು ಪಡೆದು ದಾಸ ಸಾಹಿತ್ಯವನ್ನು ಶ್ರೀಮಂತವಾಗಿಸಿವೆ. ಕರ್ನಾಟಕ ಶಾಸ್ತ್ರೀಯ ಸಂಗೀತದ ಪಿತಾಮಹರಾದ ಪುರಂದರದಾಸರ ಸಾಧನೆಯನ್ನು ಕಂಡ ಸರ್ವರೂ ‘ದಾಸರೆಂದರೆ ಪುರಂದರದಾಸರಯ್ಯಾ..!’ ಎಂದು ಕೊಂಡಾಡಿದ್ದಾರೆ. ಇವರ ಎಲ್ಲ ಕೀರ್ತನೆಗಳೂ ಕನ್ನಡ ಭಾಷೆಯಲ್ಲಿದ್ದು, ಭಕ್ತಿ ಮಾರ್ಗವನ್ನು ಜನಸಾಮಾನ್ಯರಿಗೆ ಪರಿಚಯ ಮಾಡಿಕೊಡುವ ಉದ್ದೇಶವನ್ನು ಹೊಂದಿವೆ. ಕರ್ನಾಟಕ ಸಂಗೀತಗಾರರಲ್ಲಿ ಪುರಂದರದಾಸರ ಕೀರ್ತನೆಗಳ ಪರಿಚಯ ಇಲ್ಲದವರು ಇಲ್ಲವೇ ಇಲ್ಲವೆನ್ನಬಹುದು. ಶ್ರೀ ಪುರಂದರದಾಸರು 5 ಲಕ್ಷ ಹಾಡುಗಳನ್ನು ರಚನೆ ಮಾಡಬೇಕೆಂಬ ಉದ್ದೇಶವಿಟ್ಟುಕೊಂಡಿದ್ದರು; ಅವರು 4,75,000 ಹಾಡುಗಳನ್ನು ರಚನೆ ಮಾಡಿ ಅವತಾರ ಮುಗಿಸಿದರು; ಅವರ ಮಗ ಮಧ್ವಪತಿದಾಸರು ಉಳಿದ 25,000 ಹಾಡುಗಳನ್ನು ರಚನೆ ಮಾಡಿದರು ಎಂದು ಹೇಳಲಾಗುತ್ತಿದೆ….

Purandara Dasa (1484–1564) is one of the most prominent composers of Carnatic music. Purandara Dasa addressed social issues in addition to worship in his compositions. Purandara Dasa’s Carnatic music compositions are mostly in Kannada; some are in Sanskrit. He signed his compositions with the mudra (pen name), “Purandara Vittala”

Biography

Inscriptional evidence suggests Purandara Dasa was born in 1484 CE in Kshemapura, near Tirthahalli, Shivamogga district, Karnataka state. The only son of Varadappa Nayaka, a wealthy Brahmin merchant, and Leelavati, he was named Srinivasa Nayaka, after the Lord of the Seven Hills. He received a good education in accordance with family traditions and acquired proficiency in Kannada, Sanskrit, and sacred music. At age 16 he married Saraswatibai, said by tradition to have been a pious young girl. He lost his parents at age 20, thereby inheriting his father’s business of gemstones and pawning. He prospered and became known as “navakoti narayana”

According to popular belief, he was led to devote himself to musical composition by a miraculous incident which made the heretofore greedy and miserly merchant realize the worthlessness of his attachment to worldly possessions. At 30 years of age, he gave away all his wealth to charity and together with his family left his house to lead the life of a wandering minstrel to proselytise religion. In his very first song composition, he laments his wasted life of indulgence. It begins with the words ‘Ana lae kara’ in the Shuddha Savaeri raga, set to Triputa tala.

In the course of his wandering he met the holy sage Vyasatirtha, guru of Krishnadevaraya, the emperor of Vijayanagara kingdom. According to Prof. Sambamoorthy, Srinivasa had his formal initiation at the hands of Vyasatirtha in 1525 when he was about 40 years old, with the name Purandara Dasa bestowed on him. Purandara Dasa travelled extensively through the length and breadth of the Vijayanagara empire in Karnataka, Tirupati, and Pandharapura composing and rendering soul stirring songs in praise of god. He spent his last years in Hampi. He died in 1564 at the age of 80.

Purandara Dasa and Carnatic music

Purandara Dasa systematized the method of teaching Carnatic music which is followed to the present day. He introduced the raga Mayamalavagowla as the basic scale for music instruction and fashioned series of graded lessons such as swaravalis, janta swaras, alankaras, lakshana geetas, prabandhas, ugabhogas, daatu varase, geeta, sooladis and kritis.Another of his important contributions was the fusion of bhava, raga, and laya in his compositions. Purandara Dasa was the first composer to include comments on ordinary daily life in song compositions. He used elements of colloquial language for his lyrics. He introduced folk ragas into the mainstream, setting his lyrics to tunes/ragas of his day so that even a common man could learn and sing them. He also composed a large number of lakshya and lakshana geetas, many of which are sung to this day. His sooladis are musical masterpieces and are the standard for raga lakshana. Scholars attribute the standardization of varna mettus entirely to Purandara Dasa.

According to traditional sources his compositions number as many as four hundred and seventy five thousand, but not more than 700 compositions are accessible now.

Purandara Dasa was a vaggeyakara (performer), a lakshanakara (musicologist), and the founder of musical pedagogy. For all these reasons and the enormous influence that he had on Carnatic music, musicologists call him the “Sangeeta Pitamaha” of Carnatic music.

Source Adapted from Wikipedia
http://en.wikipedia.org/wiki/Purandara_Dasa